ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳು ಪದಕ ಗೆಲ್ಲುವ ವಿಶ್ವಾಸವಿದೆ- ಚಿನ್ನ ಗೆದ್ದವರಿಗೆ 6 ಕೋಟಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಡಿಸೆಂಬರ್ 21: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ತಿಳಿಸಿದರು. ಅವರು ಇಂದು ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, 1958 ರಲ್ಲಿ ಪ್ರಾರಂಭವಾದ ಒಲಂಪಿಕ್ಸ್ […]

ಮತ್ತಷ್ಟು ಓದಿ..

ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಚಾಲನೆ

ಬೆಳಗಾವಿ: ರಾಜ್ಯದೆಲ್ಲೆಡೆ ಹಮ್ಮಿಕೊಂಡಿರುವ ಪಲ್ಸ್ ಪೋಲಿಯೋ ಲಸಿಕೆಯ ಅಭಿಯಾನಕ್ಕೆ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಚಾಲನೆ ನೀಡಿದರು. ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಮಕ್ಕಳಿದ್ದಲ್ಲಿ, ಮರೆಯದೇ ಹತ್ತಿರದ ಲಸಿಕಾ ಕೇಂದ್ರಕ್ಕೆ ಕರೆತನ್ನಿ. ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಸಚಿವರು ಕರೆ ನೀಡಿದರು. ಈ ವೇಳೆ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಮೇಶ ದಂಡಗಿ, ಪಲ್ಸ್ ಪೋಲಿಯೊ ನೊಡೆಲ್ ಅಧಿಕಾರಿ […]

ಮತ್ತಷ್ಟು ಓದಿ..

ಜೀವದ ತೊಟ್ಟಿಲು ಭೂಮಿ ಬಂಜೆಯಾಗದಿರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ, ನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಮೂಲಕ ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯಲು ಮುಂದಾಗಿ ಬೆಳಗಾವಿ.ಡಿ.20: (ಕರ್ನಾಟಕ ವಾರ್ತೆ) ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಬೆಳಗಾವಿ […]

ಮತ್ತಷ್ಟು ಓದಿ..